ಹಾವೇರಿ:
ಹಾವೇರಿ ಜಿಲ್ಲೆಯ ತಾಲೂಕಿನ ಕಳ್ಳಿಹಾಳ ಗ್ರಾಮದ ಯುವ ರೈತನೊಬ್ಬ ವಯಸ್ಸಾದರೂ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂಬ ಕಾರಣಕ್ಕೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಮೃತ ಯುವಕನನ್ನು ಪ್ರಕಾಶ ಬಸವರಾಜ ಹೂಗಾರ (35) ಎಂದು ಗುರುತಿಸಲಾಗಿದೆ, ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದ ಇವರು ಕಳೆದ 10-12 ವರ್ಷಗಳಿಂದ ಬಸವರಾಜ ಮದುವೆಯಾಗಲು ಹುಡುಗಿ ಹುಡುಕುತ್ತಿದ್ದು, ಆದರೆ ಇಲ್ಲಿಯವರೆಗೂ ಎಲ್ಲಿಯೂ ಹುಡುಗಿ ಸಿಕ್ಕಿರಲಿಲ್ಲ ಅದೇ ಚಿಂತೆಯಲ್ಲಿ ಕೊರಗುತ್ತಿದ್ದ. ಇದರಿಂದ ನೊಂದ ಬಸವರಾಜ ನಿನ್ನೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಳ್ಳಲು ಹಗ್ಗದಿಂದ ಕುತ್ತಿಗೆಗೆ ನೇಣು ಹಾಕಿಕೊಂಡು ಒದ್ದಾಡುತ್ತಿದ್ದ. ತಕ್ಷಣ ಮನೆಯವರು ಜಿಲ್ಲಾಸ್ಪತ್ರೆಗೆ ಕರೆತಂದು ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ಈತನ ತಂದೆ ಬಸವರಾಜ ಹೂಗಾರ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.