ಗುಬ್ಬಿ :
ರೈತರ ಸಮಸ್ಯೆ ಆಲಿಸದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಹಾಗೂ ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಶೀಘ್ರವೇ ರೈತ ಸಂಘ ಬೃಹತ್ ಹೋರಾಟ ನಡೆಸಲಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ತಿಳಿಸಿದರು. ಗುಬ್ಬಿ ಪಟ್ಟಣದಲ್ಲಿ ನಡೆದ ರೈತ ಸಭೆಯಲ್ಲಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಪಾಕಿಸ್ತಾನದ ವಿರುದ್ಧ ಯುದ್ದ ನಡೆಯುತ್ತಿರುವ ಹಿನ್ನಲೆ ನಮ್ಮ ಹೋರಾಟವನ್ನು ಕೆಲ ದಿನಗಳ ಕಾಲ ಮುಂದೂಡಿ ನಂತರ ದಿನಾಂಕ ನಿಗದಿ ಮಾಡಿ ಬೃಹತ್ ಮಟ್ಟದ ಗಟ್ಟಿ ಹೋರಾಟ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಈ ವೇಳೆ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಪ್ಪ, ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಸೇರಿ ನಾನಾ ತಾಲೂಕಿನ ಹಲವು ಮಂದಿ ರೈತ ಮುಖಂಡರು ಉಪಸ್ಥಿತರಿದ್ದರು.