BANGALORE NEWS : BMTC ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರನ ತಲೆ ನಜ್ಜುಗುಜ್ಜಾದ ಘಟನೆ ಬೆಂಗಳೂರು ನಗರದ ಹೆಬ್ಬಾಳದಲ್ಲಿ ನಡೆದಿದೆ.
ಹೆಬ್ಬಾಳದ ಕಲ್ಯಾಣಗರ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ನಲ್ಲಿ ಗಂಡ ಹೆಂಡತಿ ಹಾಗೂ ಮಕ್ಕಳು ತೆರಳುತ್ತಿದ್ದರು. ಈ ವೇಳೆ BMTC ಎಲೆಕ್ಟ್ರಿಕ್ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರನ ಮೇಲೆಯೇ ಹರಿದು ಹೋಗಿದೆ. ಇನ್ನು ಘಟನೆಯಲ್ಲಿ ಬೈಕ್ ಸವಾರನ ತಲೆ ಸಜ್ಜುಗುಜ್ಜಾಗಿದೆ. ಇನ್ನು ಘಟನಾ ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.