CHIKKABALLAPURA: ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ

 ಮೃತ ಗೋವರ್ಧನ್‌
ಮೃತ ಗೋವರ್ಧನ್‌
ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ: 

ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ಠಾಣಾ ವ್ಯಾಪ್ತಿಯ ಗೋಪಸಂದ್ರ ಬಳಿ ನಡೆದಿದೆ. ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೋಡಿಹಳ್ಳಿ ಗ್ರಾಮದ 22 ವರ್ಷದ ಗೋವರ್ಧನ್ಮೃತ ದುರ್ದೈವಿಯಾಗಿದ್ದಾನೆ.

ಚಿಂತಾಮಣಿ ಕಡೆಯಿಂದ ಮಾಡಿಕೆರೆ ಬಳಿ ಇರುವ ಕಲ್ಯಾಣ ಮಂಟಪಕ್ಕೆ ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ಕಾರು ಗೋಪಸಂದ್ರ ಬಳಿ ಚಿಂತಾಮಣಿ ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತನ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. 

Author:

share
No Reviews