ಕೊರಟಗೆರೆ:
ದ್ವಿಚಕ್ರ ವಾಹನ ಮತ್ತು ಬುಲೆರೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರರಿಗೆ ಕೈ ಕಾಲು ಮುರಿತವಾಗಿದ್ದು, ಗಂಭೀರ ಗಾಯಗಳಾಗಿರುವಂತಹ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೌರಗಾನಹಳ್ಳಿ ಬಳಿ ನಡೆದಿದೆ. ಗೌರಗಾನಹಳ್ಳಿ ಗ್ರಾಮದ ನಿವಾಸಿ ಚೇತನ್ ಹಾಗೂ ರಾಕೇಶ್ ಎಂಬುವವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾರೆ.
ಕೊರಟಗೆರೆ ತಾಲೂಕಿನ ಗೌರಗಾನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನಕ್ಕೆ ಎದುರಿಗೆ ಬರ್ತಿದ್ದ ಬುಲೆರೋ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರಿಗೆ ಕೈ ಕಾಲು ಮುರಿತವಾಗಿದ್ದು, ಗಂಭೀರ ಗಾಯಗೊಂಡ ಗಾಯಾಳುಗಳನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸಲಿದ್ದಾರೆ.