ಬೆಂಗಳೂರು : ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾಮಿಡಿ ಕಿಲಾಡಿಗಳು ಮೂಲಕ ಖ್ಯಾತಿ ಪಡೆದ ನಟ ಮಡೆನೂರು ಮನು ವಿರುದ್ದ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಕುರಿತು ಸಹ ಕಲಾವಿದೆಯೊಬ್ಬರು ನಟನ ವಿರುದ್ದ ಅನ್ನಪೂರ್ಣೆಶ್ವರಿನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.
ನಾಳೆ ಮಡೆನೂರು ಮನು ನಾಯಕನಾಗಿ ನಟಿಸಿರುವ ಕನ್ನಡದ ʼಕುಲದಲ್ಲಿ ಕೀಳ್ಯಾವುದೋʼ ಎಂಬ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರ ಬಿಡುಗಡೆಗೂ ಮುನ್ನವೇ ನಟನ ವಿರುದ್ದ ಅತ್ಯಾಚಾರ ಆರೋಪದಡಿ ಎಫ್ ಐಆರ್ ದಾಖಲಾಗಿದೆ. ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ, ಮಡೆನೂರು ಮನು ತಲೆಮರೆಸಿಕೊಂಡಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.