ಮಹಾರಾಷ್ಟ್ರ : ಮಹಾರಾಷ್ಟ್ರದ ಸೋಲಾಪುರದ ಕಾರ್ಖಾನೆಯಲ್ಲಿ ಬೆಂಕಿ ಅವಘಡ | 8 ಮಂದಿ ಸಜೀವ ದಹನ

ಮಹಾರಾಷ್ಟ್ರ : ಮಹಾರಾಷ್ಟ್ರದ ಸೋಲಾಪುರ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಎಂಟು ಜನರು ಪ್ರಾಣ ಕಳೆದುಕೊಂಡ ಘಟನೆ ಸಂಭವಿಸಿದೆ . ಮುಂಬೈನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಸೋಲಾಪುರ್ ಟೆಕ್ಸ್‌ಟೈಲ್ ಮಿಲ್‌ನಲ್ಲಿ ಶಾರ್ಟ್ ಸರ್‌ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೋಲೀಸರು ತಿಳಿಸಿದ್ದಾರೆ.

ಇನ್ನು ಮೃತರಲ್ಲಿ ಕಾರ್ಖಾನೆಯ ಮಾಲೀಕ ಹಾಜಿ ಉಸ್ಮಾನ್ ಹಸನ್‌ಭಾಯ್ ಮನ್ಸೂರಿ(80) ಮೊಮ್ಮಗ ಅನಸ್ ಹನೀಫ್ ಮಸೂರಿ(25), ಪತ್ನಿ ಶಿಫಾ ಅನಸ್ ಮನ್ಸೂರಿ(20), ಯೂಸುಫ್ ಮನ್ಸೂರಿ(3), ನಾಲ್ವರು ಕಾರ್ಮಿಕರು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ  ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸಲು ಹರಸಾಹಸಪಟ್ಟರು. ಬೆಂಕಿಯ ತೀವ್ರತೆಯ ಹಿನ್ನೆಲೆಯಲ್ಲಿ ಅದನ್ನು ನಿಂಯತ್ರಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿಗೆ 5ರಿಂದ 6ಗಂಟೆಗಳ ಕಾಲ ಹಿಡಿಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

 

Author:

...
Keerthana J

Copy Editor

prajashakthi tv

share
No Reviews