HUBBALLI NEWS : ಪ್ಲೈವುಡ್ ಹಾಗೂ ಬಟ್ಟೆ ರೋಲ್ಗಳನ್ನು ತುಂಬಿಸಿಕೊಂಡು ಮುಂಬೈನಿಂದ ಬೆಂಗಳೂರಿನತ್ತ ಹೊರಟಿದ್ದ ಕ್ಯಾಂಟರ್ ವಾಹನಕ್ಕೆ [CANTER VEHICLE] ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಈ ದುರಂತ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್ [NULVI CROSS] ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದಿದೆ.
ಚಿತ್ರದುರ್ಗ ಮಾರ್ಗವಾಗಿ ಸಾಗುತ್ತಿದ್ದ ಈ ವಾಹನದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡ ಚಾಲಕ ವಾಹನ ನಿಲ್ಲಿಸಿ ಬಾಗಿಲು ಹೊರಗಡೆ ಬಂದು ಬೆಂಕಿಯಿಂದ ತಪ್ಪಿಸಿಕೊಂಡಿದ್ದಾನೆ. ಆದರೆ, ಕೇವಲ ಕೆಲ ಕ್ಷಣಗಳಲ್ಲಿ ಬೆಂಕಿಯ ಕೆನ್ನಾಲೆ ಸಂಪೂರ್ಣ ವಾಹನವನ್ನು ಆವರಿಸಿದ್ದು, ಅದರೊಳಗಿನ ಪ್ಲೈವುಡ್ ಹಾಗೂ ಬಟ್ಟೆ ರೋಲ್ ಸೇರಿ ಎಲ್ಲವೂ ಭಸ್ಮವಾಗಿದೆ.
ಇನ್ನು ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ. ಈ ಮಧ್ಯೆ, ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ಜಾಗ್ರತೆಯಿಂದ ಕಾರ್ಯನಿರ್ವಹಿಸಲಾಗಿದೆ. ಇಂಜಿನ್ ಭಾಗದಲ್ಲಿ ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಬೆಂಕಿ ಸಂಭವಿಸಿದ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ನಿಖರ ಕಾರಣ ಪರಿಶೀಲನೆಯ ಬಳಿಕ ದೊರೆಯಲಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.