ರಾಮನಗರ :
ಇತ್ತೀಚೆಗೆ ಅಲ್ಲಲ್ಲಿ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇದೆ. ಇದೀಗ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯೊಂದು ಬೆಂಕಿಯ ಕೆನ್ನಾಲಗೆಗೆ ಹೊತ್ತಿ ಉರಿದಿರುವ ಘಟನೆ ರಾಮನಗರ ತಾಲೂಕಿನ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ವಡೇರಹಳ್ಳಿ ಗ್ರಾಮದ ಗುರು ಎಂಬುವರಿಗೆ ಸೇರಿದ ಮನೆಯಲ್ಲಿ ಎಸಿಯಿಂದ ಶಾರ್ಟ್ ಸರ್ಕ್ಯೂಟ್ ಆಗಿ ಈ ಅವಘಡ ಸಂಭವಿಸಿದೆ ಎನ್ನಲಾಗ್ತಿದೆ. ಎಸಿಯಿಂದ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡು. ಇಡೀ ಮನೆಗೆ ಆವರಿಸಿದೆ. ಇನ್ನು ಬೆಂಕಿಯ ಕೆನ್ನಾಲಗೆಗೆ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸಂಪೂರ್ಣ ಸುಟ್ಟುಕರಕಲಾಗಿದೆ. ಅಲ್ದೇ ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದವರು ಹೊರಗೆ ಓಡಿಬಂದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಕಿ ಅವಘಡ ಸಂಭವಿಸುತ್ತಿದ್ದಂತಯೇ ಸ್ಥಳೀಯರು ಅಗ್ನಿಶಾಮಕ ದಳ ಮಾಹಿತಿ ತಿಳಿಸಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.