SIRA : ರಾಜ್ಯದಲ್ಲಿ ಮತ್ತೆ ಮತ್ತೆ ಕೊರೊನಾ ಆತಂಕ ಹೆಚ್ಚಾಗಿದ್ದು, ಜನರಿಗೆ ಮತ್ತೆ ಕೊರೊನಾ ಟೆನ್ಷನ್ ಶುರುವಾಗಿದೆ. ತುಮಕೂರಿನಲ್ಲಿ ಒಟ್ಟು 14 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಶಿರಾದ ವ್ಯಕ್ತಿಗೆ ಕೊರೊನಾ ಸೋಂಕು ದೃಢವಾಗಿರೋ ಬಗ್ಗೆ ಜಿಲ್ಲಾಡಳಿತ ತಿಳಿಸಿತ್ತು. ಹೌದು ಶಿರಾದ 62 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು.
ಶಿರಾ ನಗರ ನಿವಾಸಿಯಾಗಿರೋ 62 ವರ್ಷದ ವ್ಯಕ್ತಿಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ಟೆಸ್ಟ್‌ಗೆ ಒಳಪಡಿಸಲಾಗಿದ್ದು, ಟೆಸ್ಟಿಂಗ್‌ನಲ್ಲಿ ಸೋಂಕು ದೃಢವಾಗಿತ್ತು. ಅವರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗ್ತಿದೆ. ಅಲ್ಲದೇ ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚಿ ಟೆಸ್ಟಿಂಗ್ ನಡೆಸಲಾಗ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಇನ್ನು ಶಿರಾ ತಾಲೂಕಿನಲ್ಲಿ ಕೊರೊನಾ ಸಂಬಂಧ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕೊರೊನಾ ನಿಯಂತ್ರಣಕ್ಕೆ ಬೇಕಾದ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಲಾಗಿದೆ ಎಂದು ಶಿರಾ ತಾಲೂಕು ವೈದ್ಯಾಧಿಕಾರಿಯಾಗಿರೋ ಡಾ.ಸಿದ್ದೇಶ್ವರ್ ತಿಳಿಸಿದರು.
ಶಿರಾದಲ್ಲಿ ಮತ್ತೆ ಕೊರೊನಾ ಸೋಂಕು ಉಲ್ಬಣಿಸಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಮತ್ತೆ ಮಾಸ್ಕ್, ಸ್ಯಾಂನಿಟೈಸೇಷನ್ ಮೊರೆ ಹೋಗುತ್ತಿದ್ದಾರೆ.