ಶಿರಾ : ಕಿಡಿಗೇಡಿಗಳ ಕೃತ್ಯಕ್ಕೆ ಅರಣ್ಯ ಸಂಪತ್ತು ಧಗಧಗ..!

ಅರಣ್ಯ ವಲಯದಲ್ಲಿ ಬೆಂಕಿ ಹೊತ್ತಿ ಹುರಿಯುತ್ತಿರುವುದು.
ಅರಣ್ಯ ವಲಯದಲ್ಲಿ ಬೆಂಕಿ ಹೊತ್ತಿ ಹುರಿಯುತ್ತಿರುವುದು.
ತುಮಕೂರು

ಶಿರಾ :

ಬೇಸಿಗೆಯ ಧಗೆಗೆ ಎಲ್ಲೆಲ್ಲೂ ಬೆಂಕಿ ದುರಂತಗಳು ಸಾಲು ಸಾಲಾಗಿ ನಡೆಯುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಶಿರಾ ತಾಲೂಕಿನ ಹೊನ್ನೇನಹಳ್ಳಿ ಚಿಕ್ಕಸಂದ್ರ ಕಾವಲ್  ಸಮೀಪಿದ ಅರಣ್ಯ ಪ್ರದೇಶಗೆ ಬೆಂಕಿ ಹೊತ್ತಿಕೊಂಡಿದ್ದು, ಅಪಾರ ಪ್ರಮಾಣದ ಗಿಡ-ಮರಗಳು ಸುಟ್ಟುಹೋಗಿವೆ. ನಿತ್ಯ ಈ ಮಾರ್ಗದಲ್ಲಿ ನೂರಾರು ಮಂದಿ ಓಡಾಡುತ್ತಿದ್ದು, ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. 

ಚಿಕ್ಕಸಂದ್ರ ಕಾವಲ್‌ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನದ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು. ಬೆಂಕಿಯ ಕಾವಲಿಗೆ ಸುಮಾರು ಎಕರೆಯಷ್ಟು ಅರಣ್ಯ ಪ್ರದೇಶದಲ್ಲಿದ್ದ ನೀಲಗಿರಿ, ಅಕೇಷಿಯಾ ಸೇರಿ ವಿವಿಧ ಜಾತಿಯ ಗಿಡ ಮರಗಳು ಸುಟ್ಟು ಭಸ್ಮವಾಗಿದೆ. ಬೆಂಕಿ ಅವಘಡದಿಂದ ಅರಣ್ಯ ಪ್ರದೇಶದ ಅಕ್ಕಪಕ್ಕದ ಜಮೀನಿನ ರೈತರಿಗೆ ಆತಂಕ ವ್ಯಕ್ತಪಡಿಸಿದರು. ಅಲ್ಲದೇ ಅರಣ್ಯ ಪ್ರದೇಶದಲ್ಲಿದ್ದ ಪ್ರಾಣಿ ಪಕ್ಷಿಗಳು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.  ಕೂಡಲೇ ಸ್ಥಳೀಯರು ಅಗ್ನಿ ಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

ಇನ್ನು ಯಾರೋ ಕಿಡಿಗೇಡಿಗಳಿಂದ ಈ ಕೃತ್ಯ ಜರುಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯ ವ್ಯಾಪಿ ಸಂಚರಿಸಿ ಅರಣ್ಯ ಸಂರಕ್ಷಣೆಗೆ ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

 

Author:

...
Editor

ManyaSoft Admin

Ads in Post
share
No Reviews