ಭಾರತೀಯ ರೈಲ್ವೆ ಇಲಾಖೆ ಖಾಲಿಯಿರುವ 32,438 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆಗೊಳಿಸಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಜನವರಿ 23ರಿಂದ ಆರಂಭಿಸಲಾಗಿದ್ದು, ಫೆಬ್ರವರಿ 22ಕ್ಕೆ ಕೊನೆಗೊಂಡಿತ್ತು. ಆದರೆ, ಇದೀಗ ಈ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಮಾರ್ಚ್ 1, 2025ರ ವರೆಗೆ ಅವಕಾಶ ಕಲ್ಪಿಸಿದೆ. ಹಲವು ವರ್ಷಗಳಿಂದ ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವವರು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. 23 ಜನವರಿ 2025ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 01 ಮಾರ್ಚ್ 2025 ಆಗಿದೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ.
ಅಭ್ಯರ್ಥಿಗಳನ್ನು ಕಂಪ್ಯೂಟರ್ ಬೇಸಡ್ ಟೆಸ್ಟ್, ದೈಹಿಕ ದಕ್ಷತೆ ಪರೀಕ್ಷೆ, ದಾಖಲೆ ಪರಿಶೀಲನೆ ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ರೈಲ್ವೆ ಇಲಾಖೆ ಬರುವುದರಿಂದ ದೇಶದ ಯಾವುದೇ ರೈಲ್ವೆ ನಿಲ್ದಾಣದಲ್ಲಿ ಕೆಲಸ ಮಾಡಲು ಅಭ್ಯರ್ಥಿಗಳು ಸಿದ್ಧರಾಗಿರಬೇಕು ಎಂದು ಇಲಾಖೆ ತಿಳಿಸಿದೆ.