ಬೆಂಗಳೂರು :
ಸಿಇಟಿ ಅಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರ ಗುಡ್ ನ್ಯೂಸ್ ಒಂದನ್ನು ನೀಡಿದೆ. ಹೌದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊಸ ಮೊಬೈಲ್ ಆ್ಯಪ್ ಮತ್ತು ಪೋರ್ಟಲ್ ಅನ್ನು ಸಿಇಟಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ಬಿಡುಗಡೆ ಮಾಡಿದೆ.
ಬೆಂಗಳೂರಿನ ಉನ್ನತ ಶಿಕ್ಷಣ ಪರಿಷತ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರಿಂದ ಈ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಯ್ತು. ಇನ್ಮುಂದೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ಸೈಬರ್ ಸೆಂಟರ್ ಗಳಿಗೆ ಹೋಗುವ ಅವಶ್ಯಕತೆಯಿಲ್ಲ, ಯಾಕಂದರೆ ಮೊಬೈಲ್ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಯ ಸಮಸ್ಯೆ ಬಗ್ಗೆ, ಕಾಲೇಜುಗಳ ಸಮಗ್ರ ಮಾಹಿತಿ, ಕಾಲೇಜಿನ ಶುಲ್ಕ ಎಷ್ಟು, ಕಾಲೇಜಿನಲ್ಲಿ ಹಾಸ್ಟೇಲ್ ಶುಲ್ಕ ಏನಿದೆ ಎಂಬುದರ ಜೊತೆಗೆ ಹಲವಾರು ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಈ ಆ್ಯಪ್ ನಲ್ಲಿ ಸಂಪೂರ್ಣ ಮಾಹಿತಿ ವಿದ್ಯಾರ್ಥಿಗಳಿಗೆ ಸಿಗಲಿದೆ.