ಇಂಡಿಯನ್ ಪ್ರೀಮಿಯರ್ ಲೀಗ್‌ನ 18ನೇ ಆವೃತ್ತಿಯ ಐದನೇ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಮ್‌ನಲ್ಲಿ ನಡೆಯಲಿದೆ. ಇನ್ನು ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಕಳೆದ ವರ್ಷ ಈ ಎರಡೂ ತಂಡಗಳು ಪ್ಲೇಆಫ್‌ಗೆ ತಲುಪಲು ವಿಫಲವಾಗಿದ್ದವು. ಈ ಬಅರಿ ಕೆಲವೊಂದು ಬದಲಾವಣೆಯೊಂದಿಗೆ ಕಣಕ್ಕಿಳಿಯಲಿದ್ದು, ಕಪ್ ಗೆಲ್ಲುವ ಉತ್ಸಾಹದಲ್ಲಿದೆ. ಗುಜರಾತ್ ತಂಡ ಕಳೆದ ಬಾರಿಯ ನಾಯಕ ಶುಭಮನ್ ಗಿಲ್ ನೇತೃತ್ವದಲ್ಲಿಯೇ ಆಡಲಿದ್ದು, ಪಂಜಾಬ್ ತಂಡಕ್ಕೆ ನೂತನ ನಾಯಕ ಶ್ರೇಯಸ್ ಅಯ್ಯರ್ ಕಾಲಿಟ್ಟಿದ್ದಾರೆ.
ಗುಜರಾತ್ ಟೈಟನ್ಸ್ ತಂಡದಲ್ಲಿ ಶುಭ್ಮನ್ ಗಿಲ್, ಜೋಶ್ ಬಟ್ಲರ್, ಸಾಯಿ ಸುದರ್ಶನ್, ಶಾರುಖ್ ಖಾನ್, ಗ್ಲೆನ್ ಫಿಲಿಪ್ಸ್, ರಾಹುಲ್ ತೆವಾಟಿಯಾ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಅರ್ಷದ್ ಖಾನ್, ರಶೀದ್ ಖಾನ್, ಕಗಿಸೊ ರಬಾಡ ಮತ್ತು ಮೊಹಮ್ಮದ್ ಸಿರಾಜ್ ಇದ್ದಾರೆ.
ಇನ್ನು ಪಂಜಾಬ್ ಕಿಂಗ್ಸ್ ತಂಡದಲ್ಲಿ ಪ್ರಭ್‌ಸಿಮ್ರಾನ್ ಸಿಂಗ್, ಪ್ರಿಯಾಂಶ್ ಆರ್ಯ, ಶ್ರೇಯಸ್ ಅಯ್ಯರ್, ಶಶಾಂಕ್ ಸಿಂಗ್, ಗ್ಲೆನ್ ಮ್ಯಾಕ್ಸ್‌ವೆಲ್, ನೆಹಾಲ್ ವಧೇರಾ, ಮಾರ್ಕಸ್ ಸ್ಟೊಯಿನಿಸ್, ಅಜ್ಮತುಲ್ಲಾ ಒಮರ್ಜಾಯ್, ಮಾರ್ಕೊ ಜಾನ್ಸೆನ್, ಹರ್‌ಪ್ರೀತ್ ಬ್ರಾರ್, ಯುಜ್ವೇಂದ್ರ ಚಾಹಲ್ ಇದ್ದಾರೆ.