ಗುಬ್ಬಿ :
ಬೀದಿ ನಾಯಿಗಳ ಗುಂಪೊಂದು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಬಾಲಕನ ಮೇಲೆ ಏಕಾಏಕಿ ಡೆಡ್ಲಿ ಅಟ್ಯಾಕ್ ನಡೆಸಿದ್ದು, ಬಾಲಕನಿಗೆ ಸಿಕ್ಕ ಸಿಕ್ಕ ಕಡೆ ಕಡಿದು ಗಾಯಗೊಳಿಸಿದೆ. ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಎನ್.ನಂದಿಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಎನ್.ನಂದಿಹಳ್ಳಿ, ಗೊಲ್ಲರಹಟ್ಟಿ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿ ನಾಯಿಗಳಿಗೆ ಕಡಿವಾಣ ಹಾಕುವಂತೆ ಹಲವು ಬಾರಿ ಮನವಿ ಮಾಡಲಾಗಿತ್ತು. ಆದರೆ ಅಧಿಕಾರಿಗಳು ಬೀದಿ ನಾಯಿಗಳಿಗೆ ಬ್ರೇಕ್ ಹಾಕುವಲ್ಲಿ ವಿಫಲರಾಗಿದ್ರು. ಇದೀಗ ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ಬಾಲಕನ ಮೇಲೆ ಏಕಾಏಕಿ ಬೀದಿ ನಾಯಿಗಳು ಎರಗಿ ಗಾಯಗೊಳಿಸಿವೆ. ಬೀದಿ ನಾಯಿಗಳ ದಾಳಿಯಿಂದ ನಾಲ್ಕನೇ ತರಗತಿ ಬಾಲಕ ಅಶ್ವತ್ಥ್ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗ್ತೀದೆ.
ಬೆಲವತ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಕಾಟ ಹೆಚ್ಚಾಗಿದ್ದು, ನಿರಂತರವಾಗಿ ಮಕ್ಕಳು ಹಾಗೂ ವೃದ್ಧರ ಮೇಲೆ ದಾಳಿ ಮಾಡುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಹಲವು ಬಾರಿ ಬೀದಿ ನಾಯಿಗಳ ಹಾವಳಿಗೆ ಬ್ರೇಕ್ ಹಾಕುವಂತೆ ಮನವಿ ಮಾಡಿದರೂ ಎಚ್ಚೆತ್ತುಕೊಳ್ಳದ ಗ್ರಾಮ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ಹೊರಹಾಕ್ತಿದ್ದಾರೆ.