ಗುಬ್ಬಿ :
ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಕೊಂಡ್ಲಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಯಶೋದಮ್ಮ ಮತ್ತು ಉಪಾಧ್ಯಕ್ಷರಾಗಿ ಸೋಮಶೇಖರಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರಾದ ಕೆಟಿ ಸೋಮೇಗೌಡ, ಲೋಕೇಶ್ ಕೆ ಎನ್, ಭಾಗ್ಯ, ಮೀನಾಕ್ಷಿ, ದೀಲಿಪ್ ಕುಮಾರ್, ನಿಂಗಯ್ಯ, ಲಕ್ಷ್ಮೀದೇವಮ್ಮ, ಜ್ಞಾನಾಂಬಿಕ, ಶ್ರೀಪತಿ, ರತ್ನಮ್ಮಬಸವರಾಜು, ಲೋಕೇಶ್, ಸೇರಿಗ್ರಾಮಸ್ಥರು ಹಾಜರಿದ್ದರು.
ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋಧಮ್ಮ ಮಾತನಾಡಿ, ಸರ್ವ ಸದಸ್ಯರ ಸಹಕಾರ ಪಡೆದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ರಸ್ತೆ ನಿರ್ಮಾಣ, ಬೀದಿ ದೀಪ ಸೇರಿದಂತೆ ಗ್ರಾಮ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದರು.
ನೂತನ ಉಪಾಧ್ಯಕ್ಷ ಸೋಮಶೇಖರಯ್ಯ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ಜೆಜೆಎಂ ಕಾಮಗಾರಿ ಅಪೂರ್ಣಗೊಂಡಿದ್ದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಚುನಾವಣಾ ಅಧಿಕಾರಿಯಾಗಿ ಇಓ ಶಿವಪ್ರಕಾಶ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.