ಗುಬ್ಬಿ : ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಮಡೇನಹಳ್ಳಿ ಗ್ರಾಮದಲ್ಲಿ ಅನಾದಿ ಕಾಲದಿಂದಲೂ ನೆಲೆಸಿರುವ ಆದಿಶಕ್ತಿ ದುರ್ಗಾ ಪರಮೇಶ್ವರಿ ಅಮ್ಮನವರ 2 ದಿನಗಳ ಜಾತ್ರಾ ಮಹೋತ್ಸವ ಬಹಳ ಅದ್ದೂರಿಯಾಗಿ ನಡೆಯಿತು.
ಜಾತ್ರಾ ಮಹೋತ್ಸವದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರಿಗೆ ಮಂಗಳವಾರ ವಿವಿಧ ಪೂಜಾ ಕೈಂಕರ್ಯಗಳು ಸೇರಿದಂತೆ ಆರತಿ ಸೇವೆ ನಡೆದವು. ನಂತರ ಅಮ್ಮನವರ ಅದ್ದೂರಿ ಮೆರವಣಿಗೆಗೆ ಸಾವಿರಾರು ಭಕ್ತರು ಸಾಕ್ಷಿಯಾದರು. ಇದೇ ವೇಳೆ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಕುಣಿದು ಕುಪ್ಪಳಿಸಿದರು.
ಇನ್ನು ಪ್ರತಿ ವರ್ಷದಂತೆ ನಡೆಯುವ ಅದ್ದೂರಿ ಜಾತ್ರಾ ಮಹೋತ್ಸವದಲ್ಲಿ ಹಲವು ಗಣ್ಯರು ಭಾಗವಹಿಸಿ ದೇವಿಯ ದರ್ಶನ ಪಡೆದು ಪುನೀತರಾದರು. ಜೊತೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ದುರ್ಗಾ ಪರಮೇಶ್ವರಿ ಅಮ್ಮನವರ ಮೆರವಣಿಗೆ ಉತ್ಸವ ಭಕ್ತಿಯ ಸಂಭ್ರಮ ಮನೆ ಮಾಡಿತ್ತು.