IPL 2025: ಕೆಕೆಆರ್‌ ವಿರುದ್ಧ ಗುಜರಾತ್‌ ಟೈಟನ್ಸ್‌ಗೆ ಸುಲಭ ಜಯ

ಕ್ರಿಕೆಟ್:

ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ನಡೆದ ಐಪಿಎಲ್ 2025ರ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗುಜರಾತ್ ಟೈಟನ್ಸ್‌ 39 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಮತ್ತಷ್ಟು  ಭದ್ರಪಡಿಸಿಕೊಂಡಿದ್ದು ಸುಲಭವಾಗಿ  ಪ್ಲೇ ಆಫ್‌ ದಾರಿ ಮತ್ತಷ್ಟು ಸುಲಭವಾಗಿದೆ.

ಗುಜರಾತ್‌ ಟೈಟಾನ್ಸ್‌ ತಂಡ ಕೆಕೆಆರ್‌ ತಂಡವನ್ನ 39 ರನ್ ಗಳಿಂದ ಸೋಲಿಸಿ ಟೂರ್ನಮೆಂಟ್‌ ನಲ್ಲಿ ಅಗ್ರಸ್ಥಾನವನ್ನ ಉಳಿಸಿಕೊಂಡಿದೆ. ಇನ್ನು ಮೊದಲು ಬ್ಯಾಟ್ ಮಾಡಿದ ಗುಜರಾತ್ ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಅವರ ಅರ್ಧಶತಕಗಳ ನೆರವಿನಿಂದ 20 ಓವರ್‌ಗಳಲ್ಲಿ 3 ವಿಕೆಟ್‌ಗಳಿಗೆ 198 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಕೆಕೆಆರ್ 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 159 ರನ್ ಗಳಿಸಲಷ್ಟೇ ಶಕ್ತವಾಯಿತು. 

ಇನ್ನು ಕೆಕೆಆರ್ ಪರ ನಾಯಕ ಅಜಿಂಕ್ಯ ರಹಾನೆ 36 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 50 ರನ್ ಗಳಿಸಿ ಅಗ್ರ ಸ್ಕೋರರ್ ಎನಿಸಿಕೊಂಡರು. ಗುಜರಾತ್ ಪರ ಪ್ರಸಿದ್ಧ್ ಕೃಷ್ಣ ಮತ್ತು ರಶೀದ್ ಖಾನ್ ತಲಾ ಎರಡು ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್, ಇಶಾಂತ್ ಶರ್ಮಾ, ವಾಷಿಂಗ್ಟನ್ ಸುಂದರ್ ಮತ್ತು ಆರ್ ಸಾಯಿ ಕಿಶೋರ್ ತಲಾ ಒಂದು ವಿಕೆಟ್ ಪಡೆದರು.

Author:

...
Manjunath

Senior Cameraman

prajashakthi tv

share
No Reviews