ಶಿವಮೊಗ್ಗ: ಶಿವಮೊಗ್ಗದಲ್ಲಿ ಪೊಲೀಸರಿಂದ ಗನ್ ಫೈರ್ | ರೌಡಿ ಶೀಟರ್ ಅರೆಸ್ಟ್

ಆರೋಪಿ ರೌಡಿ ಶೀಟರ್ ರವಿ ಅಲಿಯಾಸ್‌ ಗುಂಡ
ಆರೋಪಿ ರೌಡಿ ಶೀಟರ್ ರವಿ ಅಲಿಯಾಸ್‌ ಗುಂಡ
ಶಿವಮೊಗ್ಗ

ಶಿವಮೊಗ್ಗ:

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮೋಸ್ಟ್‌ ವಾಂಟೆಡ್‌ ರೌಡಿ ಶೀಟರ್‌ ರವಿ ಅಲಿಯಾಸ್‌ ಗುಂಡ ಎಂಬುವವರ ಬಲ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.

ಖಚಿತ ಮಾಹಿತಿ ಪಡೆದ ಪೊಲೀಸರು ಪ್ರಕರಣವೊಂದರಲ್ಲಿ ಬಂಧಿಸಲು ತೆರಳಿದ್ದಾಗ ಆರೋಪಿ ಪೊಲೀಸರ ಮೇಲೆಯೇ ದಾಳಿ ಮಾಡಲು ಯತ್ನಿಸಿದ್ದಾನೆ, ಈ ವೇಳೆ ಹೊಸಮನೆ ಪೊಲೀಸ್‌ ಠಾಣೆಯ ಪಿಎಸ್‌ ಐ ಕೃಷ್ಣ ತಮ್ಮ ಸಿಬ್ಬಂದಿಯ ರಕ್ಷಣೆಗಾಗಿ ಅನಿವಾರ್ಯವಾಗಿ ಆರೋಪಿ ರವಿ ಕಾಲಿಗೆ ಫೈರಿಂಗ್‌ ಮಾಡಲಾಗಿದೆ. ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ದರ್ಶನ್‌ ಎಂಬ ಸಿಬ್ಬಂದಿಯ ಮೇಲೆ ಹಲ್ಲೆಗೆ ಮುಂದಾದಾಗ, ಪಿಎಸ್‌ ಐ ಕೃಷ್ಣ ಅವರು ಶರಣಾಗತಿಗೆ ಎಚ್ಚರಿಕೆ ನೀಡಿದ್ದರು, ಆದರೆ ಆರೋಪಿ ಲೆಕ್ಕಿಸದೇ ಪರಾರಿಯಾಗಲು ಯತ್ನಿಸಿದಾಗ ಆತನ ಕಾಲಿಗೆ ಪಿಎಸ್‌ ಐ ಗುಂಡು ಹಾರಿಸಿದ್ದಾರೆ. ಪೊಲೀಸ್‌ ಸಿಬ್ಬಂದಿಯನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೆ, ಗಾಯಗೊಂಡ ಆರೋಪಿಯನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

Author:

share
No Reviews