ಬೆಂಗಳೂರು : ಇಂದು ಭಾರತದ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ತಮ್ಮ 93ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಸ್ಥಾನವನ್ನು ಪಡೆದಿರುವ ಈ ಹಿರಿಯ ನಾಯಕನಿಗೆ ವಿವಿಧ ರಾಜಕೀಯ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ.
ದೇವೇಗೌಡರ ಹುಟ್ಟುಹಬ್ಬದ ಈ ವಿಶೇಷ ದಿನದಂದು, ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕೃತ ಎಕ್ಸ್ ಖಾತೆ ಮೂಲಕ ದೇವೇಗೌಡರಿಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಸಾರ್ವಜನಿಕ ಸೇವೆಗಾಗಿ ಎಲ್ಲೆಡೆ ಗೌರವಾನ್ವಿತರಾಗಿದ್ದಾರೆ. ಅವರ ಬುದ್ಧಿವಂತಿಕೆ ಹಾಗೂ ಮುತ್ಸದ್ದಿತನ ಎಲ್ಲರಿಗೂ ಶಕ್ತಿಯ ಮೂಲವಾಗಿದೆ. ದೇವರು ಅವರಿಗೆ ದೀರ್ಘ, ಆರೋಗ್ಯಕರ ಜೀವನವನ್ನು ಕರುಣಿಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ತಮ್ಮ ಅಧಿಕೃತ ಎಕ್ಸ್ ಖಾತೆ ಮೂಲಕ ದೇವೇಗೌಡರಿಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಮೂಲಕ ದೇವೇಗೌಡರಿಗೆ ಶುಭಕೋರಿದ್ದಾರೆ. ನಾಡಿನ ಹಿರಿಯ ರಾಜಕಾರಣಿ ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸುತ್ತೇನೆ ಎಂದು ಶುಭಾಷಯವನ್ನು ತಿಳಿಸಿದ್ಧಾರೆ.
ಕೇಂದ್ರ ಸಚಿವ ಹಾಗೂ ದೇವೇಗೌಡರ ಪುತ್ರ ಹೆಚ್.ಡಿ. ಕುಮಾರಸ್ವಾಮಿ ಭಾವನಾತ್ಮಕವಾಗಿ ತಮ್ಮ ತಂದೆಗೆ ಭಕ್ತಿಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಪೂಜ್ಯ ತಂದೆಯವರು ನನ್ನ ಶಕ್ತಿ, ಧೈರ್ಯ, ಸ್ಫೂರ್ತಿ. ಅವರ ಸೇವಾ ತಾತ್ಪರ್ಯ ನನ್ನ ಜೀವನದ ಪ್ರೇರಣೆ. ದೇವರು ಅವರಿಗೆ ಇನ್ನಷ್ಟು ಆಯುಷ್ಯ ನೀಡಿ, ಸುದೀರ್ಘ ಕಾಲ ನಮಗೆ ಮಾರ್ಗದರ್ಶನ ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಹೆಚ್.ಡಿ ದೇವೇಗೌಡರಿಗೆ ಪ್ರಧಾನಮಂತ್ರಿ, ಮುಖ್ಯಮಂತ್ರಿಗಳಷ್ಟೇ ಅಲ್ಲ, ರಾಜಕೀಯ ಗಣ್ಯರು, ಪಕ್ಷದ ಕಾರ್ಯಕರ್ತರು, ಜನರು, ಅಭಿಮಾನಿಗಳು ವಿಶ್ ಮಾಡುತ್ತಿದ್ದಾರೆ. ಇನ್ನು ಬೆಂಗಳೂರಿನಲ್ಲಿ ವಿವಿಧ ವಿಭಾಗಗಳ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.