ಹಾಸನ:
ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಾರಿ ಹೊತ್ತಿ ಉರಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಮಂಗಳೂರಿನಿಂದ ಹಾಸನ ಕಡೆಗೆ ಕಲ್ಲಿದ್ದಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯಲ್ಲಿ ರಾಜಕಟ್ಟೆ ಎಂಬಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಲಾರಿಗೆ ಬೆಂಕಿ ಬಿದ್ದು, ಹೊತ್ತಿ ಉರಿದಿದೆ ಎನ್ನಲಾಗಿದೆ. ನಂತರ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕಾಗಿಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯ ಕೆನ್ನಾಲಗೆಗೆ ಲಾರಿಯು ಭಾಗಶಃ ಸುಟ್ಟು ಹೋಗಿದೆ. ಅಗ್ನಿ ಶಾಮಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಚಾಲಕ ಬೆಂಕಿ ಅನಾಹುತದಿಂದ ಪಾರಾಗಿದ್ದಾರೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.