ಹಾಸನ : ವಿದ್ಯುತ್‌ ತಂತಿ ತಗುಲಿ ಇಬ್ಬರು ಯುವಕರ ದಾರುಣ ಸಾವು

ಹಾಸನ :

ಮನೆಯಲ್ಲಿ ಕಾರ್ಪೆಂಟರ್‌ ಕೆಲಸ ಮಾಡುತ್ತಿದ್ದಾಗ ಇಬ್ಬರು ಯುವಕರಿಗೆ ಆಕಸ್ಮಿಕವಾಗಿ ವಿದ್ಯುತ್‌ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನ ಗರಿಘಟ್ಟ ಗ್ರಾಮದಲ್ಲಿ ನಡೆದಿದೆ. ಸೃಜನ್‌ (19) ಮತ್ತು ಸಂಜಯ್‌ (19) ಎಂಬುವರು ಮೃತ ದುರ್ದೈವಿಗಳಾಗಿದ್ದಾರೆ.

ಮೃತ ಯುವಕರಿಬ್ಬರು ಮಹೇಂದ್ರ ಎಂಬುವರ ಮನೆಗೆ ಮರದ ಕೆಲಸಕ್ಕೆಂದು ಬಂದಿದ್ದರು , ಈ ವೇಳೆ ಏಕಾಏಕಿ ವಿದ್ಯುತ್‌ ತಂತಿ ತಗುಲಿ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಅರಕಲಗೂಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author:

share
No Reviews