ಹಾಸನ:
ಪಾಳು ಬಿದ್ದ ಕಟ್ಟಡ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಚನ್ನಕೇಶವ ದೇವಾಲಯದ ಮುಖ್ಯರಸ್ತೆಯಲ್ಲಿ ನಡೆದಿದೆ.
ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ಆಶಾ ಹಾಗೂ ದೀಪಾ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪಾಳು ಬಿದ್ದಿದ್ದ ಕಟ್ಟಡದ ಕೆಳಗೆ ಮೃತಪಟ್ಟ ಮಹಿಳೆಯರು ವ್ಯಾಪಾರ ಮಾಡುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಟ್ಟಡ ಏಕಾಏಕಿ ಕುಸಿದು ಬಿದ್ದು ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಕಟ್ಟಡದ ಅವಶೇಷಗಳಡಿ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಕಾರ್ಯಚರಣೆ ಮಾಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.