ಹಾವೇರಿ:
ಹಾವೇರಿ ತಾಲೂಕಿನ ಮೇವುಂಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಿಂದ ರಾಣೇಬೆನ್ನೂರು ಕಡೆಗೆ ಹೊರಟಿದ್ದ ಸರ್ಕಾರಿ ಬಸ್ ಆದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸದ್ಯ ಅದೃಷ್ಟವಶಾತ್ ಬಸ್ಸಿಬಲ್ಲಿದ್ದ 20 ಕ್ಕೂ ಹೆಚ್ಚೂ ಮಂದು ಪ್ರಯಾಣಿಸುತ್ತಿದ್ದರು, ಸದ್ಯ ಪ್ರಯಾಣಿಕರು ಪ್ರಾಣಾಪಯದಿಂದ ಪಾರಾಗಿದ್ದಾರೆ, ಯಾವುದೇ ಪ್ರಾಣಾ ಹಾನಿಯಾಗಿಲ್ಲ,
ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಗುತ್ತಲ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.