Haveri : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ | ನಾಲ್ವರು ಅರೆಸ್ಟ್

HAVERI: ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ್ ಹಾಗೂ ಮಾರುತಿ ಶಿಗ್ಗಟ್ಟಿ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಮೂವರು ದೌರ್ಜನ್ಯ ಮಾಡಿದ ಆರೋಪಿಗೆ ಸಹಕಾರ ನೀಡಿದವರು ಎಂದು ತಿಳಿದುಬಂದಿದ್ದು, ಅವರು ಸಂತ್ರಸ್ತೆಯ ಕುಟುಂಬದೊಂದಿಗೆ ರಾಜಿ ಪಂಚಾಯತಿ ಮಾಡಲು ಯತ್ನಿಸಿದ್ದರು ಎನ್ನಲಾಗ್ತಿದೆ.

ಈ ಬಗ್ಗೆ ಬಂಕಾಪುರ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸ್ತಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Author:

...
Sushmitha N

Copy Editor

prajashakthi tv

share
No Reviews