ಈಗಾಗಲೇ ಬೇಸಿಗೆ ಆರಂಭವಾಗಿದ್ದು, ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕಾಗುತ್ತದೆ. ಬೇಸಿಗೆಯಲ್ಲಿ ಪ್ರತಿದಿನ ಬೆಳಿಗ್ಗೆ ಚಿಯಾ ಬೀಜಗಳ ನೀರನ್ನು ಕುಡಿದರೆ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಹೌದು ಚಿಯಾ ಬೀಜಗಳು ಒಮೆಗಾ -3 ಕೊಬ್ಬಿನಾಮ್ಲಗಳು, ಫೈಬರ್, ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ. ಪ್ರತಿದಿನ ಬೆಳಿಗ್ಗೆ ಚಿಯಾ ಬೀಜಗಳ ನೀರನ್ನು ಕುಡಿಯುವುದರಿಂದ ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳು ದೊರೆಯುತ್ತವೆ.
ಚಿಯಾ ಬೀಜಗಳಿಂದಾಗುವ ಪ್ರಯೋಜನಗಳೆಂದರೆ :
ತೂಕ ಇಳಿಸಿಕೊಳ್ಳಲು ಸಹಾಯಕ: ಚಿಯಾ ಬೀಜಗಳು ಫೈಬರ್ನಲ್ಲಿ ಸಮೃದ್ಧವಾಗಿವೆ, ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಅಲ್ದೇ ಇದು ಅನಿಯಮಿತ ಹಸಿವು ಮತ್ತು ಅತಿಯಾಗಿ ತಿನ್ನುವ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಸಹಾಯಕವಾಗಿದೆ.
ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ: ಚಿಯಾ ಬೀಜಗಳ ನೀರನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುತ್ತದೆ. ಇದರಲ್ಲಿರುವ ಫೈಬರ್ ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ ಮತ್ತು ಕರುಳನ್ನು ಸ್ವಚ್ಛಗೊಳಿಸುತ್ತದೆ. ಅಲ್ದೇ ಗ್ಯಾಸ್ಟ್ರಿಕ್, ಆಸಿಡಿಟಿ ಮತ್ತು ಅಜೀರ್ಣದಂತಹ ಹೊಟ್ಟೆಯ ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ.
ಆಯಾಸ ಕಡಿಮೆಯಾಗುತ್ತದೆ: ಚಿಯಾ ಬೀಜಗಳಲ್ಲಿರುವ ಪ್ರೋಟೀನ್ ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳು ದೇಹಕ್ಕೆ ಶಕ್ತಿಯನ್ನು ಒದಗಿಸುತ್ತವೆ. ಬೆಳಿಗ್ಗೆ ಚಿಯಾ ಬೀಜಗಳ ನೀರನ್ನು ಕುಡಿಯುವುದರಿಂದ ದಿನವಿಡೀ ಚೈತನ್ಯ ತುಂಬುತ್ತದೆ ಮತ್ತು ಆಯಾಸ ಕಡಿಮೆಯಾಗುತ್ತದೆ.
ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ: ಚಿಯಾ ಬೀಜಗಳಲ್ಲಿರುವ ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳು ಹೃದಯಕ್ಕೆ ಬಹಳ ಪ್ರಯೋಜನಕಾರಿ. ಇವು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತವೆ. ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ, ಇದರಿಂದಾಗಿ ಹೃದಯ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ.