Health Tips:
ಬಾದಾಮಿಯನ್ನು ಹುರಿದು ತಿನ್ನುವುದು ಅಥವಾ ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಸಿಪ್ಪೆ ತೆಗೆದು ತಿನ್ನುವುದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ ಎನ್ನುವುದನ್ನು ನೀವು ಕೇಳಿರಬಹುದು. ಆದರೆ ಜೇನುತುಪ್ಪದಲ್ಲಿ ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು, ಬಾದಾಮಿ ಮತ್ತು ಜೇನು ಎರಡೂ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಮತ್ತು ಅವುಗಳ ಸಂಯೋಜನೆಯು ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನವನ್ನು ನೀಡುತ್ತದೆ. ಪ್ರತಿದಿನ ಬೆಳಗ್ಗೆ ಜೇನುತುಪ್ಪದಲ್ಲಿ ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ನೋಡೋಣ..
ಜೀರ್ಣ ವ್ಯವಸ್ಥೆಯನ್ನು ಸುಧಾರಿಸುತ್ತದೆ
ಬೀಜಗಳನ್ನು ಜೇನುತುಪ್ಪದಲ್ಲಿ ನೆನೆಸಿಟ್ಟರೆ ಅವುಗಳನ್ನು ಜೀರ್ಣಿಸಿಕೊಳ್ಳಲು ಸುಲಭವಾಗುತ್ತದೆ. ಬಾದಾಮಿ ಫೈಬರ್ ಅನ್ನು ಹೊಂದಿರುತ್ತದೆ, ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಚರ್ಮಕ್ಕೆ ಪ್ರಯೋಜನಕಾರಿ
ಜೇನುತುಪ್ಪವು ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಇದು ಚರ್ಮವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದು ಮೊಡವೆ, ಕಲೆಗಳು ಮತ್ತು ಸುಕ್ಕುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಹೃದಯಕ್ಕೆ ಒಳ್ಳೆಯದು
ಜೇನುತುಪ್ಪದಲ್ಲಿ ನೆನೆಸಿದ ಬಾದಾಮಿಯಲ್ಲಿ ಮೊನೊಸಾಚುರೇಟೆಡ್ ಕೊಬ್ಬುಗಳು ಮತ್ತು ಉತ್ಕರ್ಷಣ ನಿರೋಧಕಗಳು ಇರುತ್ತವೆ. ಇವು ಹೃದಯಕ್ಕೆ ತುಂಬಾ ಒಳ್ಳೆಯದು. ಜೇನುತುಪ್ಪದಲ್ಲಿರುವ ಆಂಟಿ-ಆಕ್ಸಿಡೆಂಟ್‌ಗಳು ಹೃದಯದ ಅಪಧಮನಿಗಳಲ್ಲಿ ಉಂಟಾಗುವ ಉರಿಯೂತವನ್ನು ಕಡಿಮೆ ಮಾಡಿ, ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.
ತೂಕ ಇಳಿಸುಲು ಸಹಾಯಕ
ಜೇನುತುಪ್ಪದಲ್ಲಿ ನೆನೆಸಿದ ಬಾದಾಮಿಯನ್ನು ಸೇವಿಸುತ್ತಾ ಬಂದರೆ ಜೀರ್ಣಕ್ರಿಯೆಯನ್ನು ಸುಧಾರಿಸುವುದಲ್ಲದೆ, ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಅದಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಿ ದೇಹದಲ್ಲಿರುವ ಹೆಚ್ಚುವರಿ ಕ್ಯಾಲೊರಿಗಳನ್ನು ಸುಡಲು ಸಹಾಯ ಮಾಡುತ್ತದೆ.