ರಾಜ್ಯ : ರಾಜ್ಯದೆಲ್ಲೆಡೆ ಬಿಸಿಲಿನ ನಡುವೆಯೇ ಭರ್ಜರಿ ಮಳೆಯಾಗುತ್ತಿದೆ. ಮುಂಗಾರು ಆರಂಭಕ್ಕೂ ಮುನ್ನವೇ ಜವರಾಯ ಧರೆಗಿಳಿಯುತ್ತಿದ್ದಾನೆ. ಇನ್ನು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ,
ರಾಜಧಾನಿ ಸೇರಿ ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ವಿಜಯಪುರ ಜಿಲ್ಲೆಗಳಿಗೆ ಘೋಷಣೆ ಮಾಡಲಾಗಿದೆ. ಇತ್ತ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.
ಬೆಂಗಳೂರಲ್ಲಿ ಬಿಸಿಲಿನ ವಾತಾವರಣ ಹೆಚ್ಚಾಗಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಹೆಚ್ಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎನ್ನಲಾಗಿದೆ.