RAIN ALERT : ಜೂ.11ಕ್ಕೆ ರಾಜ್ಯದಲ್ಲಿ ಭರ್ಜರಿ ಮಳೆ? | ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

STATE : ಕಳೆದ ತಿಂಗಳು ರಾಜ್ಯಾದ್ಯಂತ ಭರ್ಜರಿ ಮಳೆಯಾಗಿತ್ತು. ಭರ್ಜರಿ ಮಳೆಗೆ ಒಂದು ಕಡೆ ರೈತರು ಸಂತಸ ಪಟ್ರೆ, ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವರು, ವಾಹನ ಸವಾರರು ಹೈರಾಣಾಗಿದ್ರು. ಈ ತಿಂಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿದ್ದು, ಮತ್ತೆ ಜೂನ್ 11ರಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಹೌದು, ನಿಗದಿತ ಅವಧಿಗಿಂತ ಮೊದಲೇ ರಾಜ್ಯಕ್ಕೆ ಕಾಲಿಟ್ಟು ಆರಂಭದಲ್ಲಿ ಭಾರಿ ಮಳೆಯಾಗಿತ್ತು. ಭರ್ಜರಿ ಮಳೆಯಾಗುವ ಮುನ್ಸೂಚನೆ ನೀಡಿದ್ದ ಮುಂಗಾರು ಒಂದೇ ವಾರದಲ್ಲಿ ಕ್ಷೀಣಿಸಿದ್ದು, ರೈತರಲ್ಲಿ ಆತಂಕ ಮೂಡಿಸಿತ್ತು. ಇದೀಗ ರಾಜ್ಯದಲ್ಲಿ ಸೋಮವಾರದಿಂದ ಮುಂಗಾರು ಮತ್ತೆ ಚುರುಕಾಗುವ ಸಾಧ್ಯತೆಯಿದ್ದು, ಜೂನ್ 11ರಿಂದ ಭಾರಿ ಮಳೆಯಾಗಲಿದೆ.  

ಇನ್ನು ಜೂನ್ 11ರಂದು ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 12ರಂದು ಚಿಕ್ಕಬಳ್ಳಾ ಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ, ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Author:

...
Keerthana J

Copy Editor

prajashakthi tv

share
No Reviews