ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಇಂದು ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ KSRTC ಬಸ್ ಕಾರಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್ ಸೇರಿದಂತೆ ತಾಲ್ಲೂಕಿನ ಹಲವೆಡೆ ಇಂದು ಮುಂಜಾನೆಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಅದೇ ಸಂದರ್ಭದಲ್ಲೇ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಎದುರಿನಿಂದ ಬಂದ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದು, ನಂತರ ರಸ್ತೆ ಬದಿಗೆ ಜಾರಿದೆ.
ಇನ್ನು ಈ ಘಟನೆಯಲ್ಲಿ ಕಾರು ಚಾಲಕ ಮತ್ತು ಬಸ್ನ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರ ನೆರವಿನಿಂದ ಅವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಇನ್ನು ಈ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.