RAIN ALERT : ಭಾರೀ ಮಳೆ | ಕರ್ನಾಟಕದ ಕರಾವಳಿ ಸೇರಿ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್

ರಾಜ್ಯ : ರಾಜ್ಯದಾದ್ಯಂತ ಮುಂಗಾರು ಚುರುಕುಗೊಳ್ಳಲಿದ್ದು, ಇಂದಿನಿಂದ ಭಾರಿ ಮಳೆಯ ಮುನ್ಸೂಚನೆ ಇದೆ. ಕರ್ನಾಟಕ ರಾಜ್ಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ಕರಾವಳಿ ಹಾಗೂ ಮಲೆನಾಡು ಭಾಗದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಜಾರಿಯಲ್ಲಿದೆ.

ಇತರ ಜಿಲ್ಲೆಗಳಲ್ಲಿ ಎಚ್ಚರಿಕೆ ಸೂಚನೆಗಳು:

  • ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಪ್ರಕಟಿಸಲಾಗಿದೆ.
  • ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
  • ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್ನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಬೆಂಗಳೂರಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಸಂಭವಿಸಿರುವುದರಿಂದ ಕರ್ನಾಟಕ, ಗೋವಾ, ಕೇರಳ ಹಾಗೂ ತಮಿಳುನಾಡು ಕರಾವಳಿಗೆ ಮುಂಗಾರು ಏಕಕಾಲಕ್ಕೆ ಪ್ರವೇಶಿಸಿದೆ. ಮುಂದಿನ ನಾಲ್ಕು ರಿಂದ ಐದು ದಿನಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

Author:

...
Keerthana J

Copy Editor

prajashakthi tv

share
No Reviews