ರಾಜ್ಯ :
ಮುಂದಿನ 7 ದಿನಗಳ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಇಂದಿನಿಂದ ಮೇ 16 ರವರೆಗೆ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನುಳಿದ ದಿನಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಇನ್ನು, ಮುಂಗಾರು ಬರುವಿಕೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ನೀಡಿರುವ ಹವಾಮಾನ ಇಲಾಖೆ – ಐಎಂಡಿ, ಮುಂಗಾರು ಈ ಬಾರಿ ಐದು ದಿನ ಮುಂಚಿತವಾಗಿಯೇ ಕರ್ನಾಟಕವನ್ನು ತಲುಪಲಿದೆ ಎಂದು ತಿಳಿಸಿದೆ. ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಮುಂಗಾರು ಆಗಮಿಸಬಹುದಾದರೂ ಈ ಬಾರಿ ಮಳೆಗಾಲವು ಮೇ ತಿಂಗಳಲ್ಲಿಯೇ ತನ್ನ ಚಟುವಟಿಕೆಯನ್ನು ಆರಂಭಿಸಿದೆ ಎಂಬುದಾಗಿ ತಿಳಿದುಬರುತ್ತಿದೆ.
ಇಂದು ಕರ್ನಾಟಕದ ವಿವಿಧೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಹಲವು ಭಾಗಗಳಲ್ಲಿ ಮಳೆಯಾಗಿದ್ದು, ರಾಜ್ಯದ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿಯೂ ಮಳೆ ತಮ್ಮ ಚಟುವಟಿಕೆಯನ್ನು ಮತ್ತೊಮ್ಮೆ ಆರಂಭಿಸಿದೆ. ಕಳೆದ ಕೆಲವು ದಿನಗಳಿಂದ ಬಿಸಿಲಿನ ಅಪ್ಪಳಕ್ಕೆ ಬಳಲುತ್ತಿದ್ದ ಬೆಂಗಳೂರುರಿಗರ ನೆನ್ನೆ ಸಂಜೆ ಆಕಸ್ಮಿಕವಾಗಿ ಮಳೆಯಯಾಗಿತ್ತು.
ಇಂದು ಕೂಡ ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಗುಡುಗು ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.