ಬಳ್ಳಾರಿ:
ಬಳ್ಳಾರಿ ಜಿಲ್ಲೆಯಲ್ಲಿ ಸುರಿದ ಆಲಿಕಲ್ಲು ಸಹಿತ ಭಾರೀ ಮಳೆಯಿಂದ ಬೆಳೆಗಳು ಹಾಳಾಗಿದ್ದು ಅನ್ನದಾತರು ಸಂಕಷ್ಟಕ್ಕೀಡಾಗಿದ್ದಾರೆ. ಮಳೆಗೆ ಭತ್ತದ ಬೆಳೆ ಸಂಪೂರ್ಣ ಹಾಳಾಗಿದ್ದು ರೈತರು ಸಾಲದ ಸುಳಿಗೆ ಸಿಲುಕುವಂತಾಗಿದೆ.
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ವ್ಯಾಪ್ತಿಯ 150 ಎಕರೆಗೂ ಅಧಿಕ ಭತ್ತದ ಬೆಳೆ ಆಲಿಕಲ್ಲು ಮಳೆಗೆ ನಾಶವಾಗಿದೆ. ಈಗಾಗಲೇ ಭತ್ತ ಕಟಾವಿಗೆ ಬಂದಿತ್ತು. ಆದರೆ ಮಳೆಗೆ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಹಾಳಾಗಿದೆ. ಬೆಳೆ ಹಾಳಾಗಿದ್ರೂ ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಕ್ಷಾಂತರ ಖರ್ಚು ಮಾಡಿ ಬೆಳೆ ಬೆಳೆದಿದ್ದೆವು. ಆದರೆ ಇನ್ನೇನು ಬೆಳೆ ಕಟಾವು ಮಾಡಬೇಕು ಎನ್ನುವಷ್ಟರಲ್ಲಿ ಮಳೆರಾಯ ಆಹುತಿ ಪಡೆದಿದ್ದಾನೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ನಾವು ಸಾಲದ ಸುಳಿಗೆ ಸಿಲುಕಿದ್ದೇವೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.