RAIN ALERT: ಇಂದಿನಿಂದ ಮೂರು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

ರಾಜ್ಯ :

ಬಿರು ಬೇಸಿಗೆಯಿಂದ ಜನರು ಜನರು ಬಳಲಿ ಬೆಂಡಾಗಿದ್ದಾರೆ. ನಡುವೆ ರಾಜ್ಯದಕೆಲವು ಜಿಲ್ಲೆಗಳಲ್ಲಿ ಆಗಾಗ ವರುಣನ  ಸಿಂಚನ ಆಗ್ತಾ ಇದೆ. ನಡುವೆ ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದಿನಿಂದ ಮೇ 2 ವರೆಗೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರಮುಖವಾಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ‌ಹಾವೇರಿ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನೂ ಶಿವಮೊಗ್ಗ, ಚಿತ್ರದುರ್ಗ, ಉಡುಪಿ, ಚಿಕ್ಕಮಗಳೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ‌ಚಾಮರಾಜನಗರ, ಕೋಲಾರ, ರಾಮನಗರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

 

 

Author:

...
Keerthana J

Copy Editor

prajashakthi tv

share
No Reviews