ರಾಜ್ಯ:
ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹವಾಮಾನ ಇಲಾಖೆ ರಾಜ್ಯದ ಬಹುತೆಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ಕೆಲವು ಭಾಗಗಳಿಗೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಜಾರಿಗೊಳಿಸಿದೆ. ಹೌದು, ರಾಜ್ಯದ ಪ್ರಮುಖ ಭಾಗಗಳಲ್ಲಿ ಬಿರು ಬಿಸಿಲು ನಿಂತು, ಆಕಾಶದಲ್ಲಿ ಮೋಡಗಳ ಕವಿತೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಕಪ್ಪು ಮೋಡಗಳು ಆವರಿಸಿದ್ದು, ಕೆಲವೇ ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮೇ 4ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ವಿಜಯಪುರ, ರಾಯಚೂರು, ಕೊಪ್ಪಳ, ಹುಬ್ಬಳ್ಳಿ, ಯಾದಗಿರಿ, ಬಾಗಲಕೋಟೆ, ಗದಗ ಸೇರಿದಂತೆ ಇನ್ನಿತರ ಭಾಗಗಳಿಗೆ ಘೋಷಿಇದೆ. ಇನ್ನು ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೂ ಮಳೆಯ ತೀವ್ರತೆ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಇವುಗಳಲ್ಲಿ ಯೆಲ್ಲೋ ಅಲರ್ಟ್ ಮೇ 4ರ ವರೆಗೆ ಮುಂದುವರೆಯಲಿದ್ದು, ಹೆಚ್ಚಿನ ಮಳೆಯ ಸಾಧ್ಯತೆಯಿದೆ.
ಇನ್ನೂ ಮುಂದಿನ ಮೂರು ದಿನಗಳ ಕಾಲ ಮಳೆಯ ಆರ್ಭಟ ರಾಜ್ಯದ ಎಲ್ಲೆಡೆ ಮುಂದುವರಿಯಲಿದೆ. ಮುಂಗಾರು ಪೂರ್ವ ಮಳೆಯ ತೀವ್ರತೆ ಈ ವರ್ಷ ಇನ್ನೂ ಆರಂಭದಲ್ಲೇ ಹೆಚ್ಚು ಕಾಣಿಸಿಕೊಂಡಿದ್ದು, ಈ ಬಾರಿ ಮುಂಗಾರಿನಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆಯಿದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.