ಬೆಂಗಳೂರು :
ಮನೆ ಆವರಣದಲ್ಲಿ ಬೆಳೆದಿದ್ದ ಗಾಂಜಾ ಗಿಡದಿಂದ ಕ್ರಿಮೀನಲ್ ಕೇಸ್ ಎದುರಿಸುತ್ತಿದ್ದ 67 ವರ್ಷದ ಬೆಂಗಳೂರಿನ ವ್ಯಕ್ತಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. 2023 ರಲ್ಲಿ ಬೆಂಗಳೂರಿನ ಜಯನಗರದ ಚಂದ್ರಶೇಖರ್ ಎಂಬುವರ ಮನೆ ಆವರಣದಲ್ಲಿ ಐದು ಗಾಂಜಾ ಗಿಡಗಳು ಬೆಳೆದಿದ್ದವು. ಈ ಪ್ರಕರಣ ಸಂಬಂಧ ಪೊಲೀಸರು ಚಂದ್ರಶೇಖರ್ ವಿರುದ್ಧ ಕೇಸ್ ದಾಖಲಿಸಿದ್ದು. ಇದೀಗ ಹೈಕೋಟ್ ಈ ಕೇಸ್ ಗೆ ರಿಲೀಫ್ ನೀಡಿದೆ.
ಈ ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ್ದ ಚಂದ್ರಶೇಖರ್, ಅವರು ತಾನು ಉದ್ದೇಶ ಪೂರ್ವಕವಾಗಿ ಗಾಂಜಾ ಬೆಳೆದಿಲ್ಲ, ತನ್ನಷ್ಟಕ್ಕೇ ಅದು ಬೆಳೆದಿತ್ತು ಎಂದು ವಾದ ಮಂಡಿಸಿದ್ದರು. ಚಂದ್ರಶೇಖರ್ ಪರವಾದ ಮಂಡಿಸಿದ ವಕೀಲ ಜಯಶ್ಯಾಮ್ ಜಯಸಿಂಹರಾವ್ ಪರಾಗ ಸ್ಪರ್ಷದಿಂದಲೂ ತನ್ನಿಂತಾನೇ ಐದು ಗಾಂಜಾ ಗಿಡ ಬೆಳೆದಿವೆ, ಇದರ ಬಗ್ಗೆ ಚಂದ್ರಶೇಖರ್ ಅವರಿಗೆ ಅರಿವಿಲ್ಲ ಎಂದು ವಾದ ಮಂಡಿಸಿದ್ದರು.
ಈ ಬಗ್ಗೆ ಪೊಲೀಸರು ಹೇಳುವಂತೆ 27 ಕೆಜಿ ಗಾಂಜಾ ಸಿಕ್ಕಿಲ್ಲ ಗಾಂಜಾ ಗಿಡವನ್ನು ಅದರ ಬೇರು, ರಂಬೆ, ಕೊಂಬೆ, ಎಲೆ ಸಹಿತವಾಗಿ ತೂಕ ಹಾಕಿಲ್ಲ, ಹೀಗಾಗಿ ಒಟ್ಟಾರೆಯಾಗಿ ಈ ಪ್ರಕ್ರಿಯೆಯೇ ಕಾನೂನು ಬಾಹಿರವೆಂದು ವಾದಿಸಿದರು. ಹೌದು.. 2023 ರಲ್ಲಿ ಬೆಂಗಳೂರಿನ ಜಯನಗರ ಚಂದ್ರಶೇಖರ್ ಎಂಬುವವರ ಮನೆ ಆವರಣದಲ್ಲಿ ಗಾಂಜಾ ಗಿಡಗಳು ಬೆಳೆದಿದ್ದವು. ಈ ಪ್ರಕರಣ ವಿರುದ್ದ ಕೇಸ್ ದಾಖಲಿಸಿದ್ದು, ಇದೀಗ ಆ ಪ್ರಕರಣವನ್ನು ಹೈಕೋರ್ಟ್ ಇಂದು ರದ್ದುಗೊಳಿಸಿದೆ. ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಹಿರಿಯ ನಾಗರೀಕ ಚಂದ್ರಶೇಖರ್ ವಿರುದ್ದದ ದೋಷಾರೋಪ ಪಟ್ಟಿಯನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ ಅರ್ಜಿದಾರರಿಗೆ ರಿಲೀಫ್ ನೀಡಿದೆ.