ಇಂಡಿಯನ್ ಪ್ರೀಮಿಯರ್ ಲೀಗ್‌ನ 18ನೇ ಆವೃತ್ತಿಯ ನಾಲ್ಕನೇ ಪಂದ್ಯ ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಕಾದಾಟ ನಡೆಸಲಿವೆ. ಇಬ್ಬರು ಹೊಸ ನಾಯಕರ ನಡುವಿನ ಕಾದಾಟ ರೋಚಕತೆ ಹುಟ್ಟಿಸಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಟೂರ್ನಿಯಲ್ಲಿ ಜಯದ ಶುಭಾರಂಭ ಮಾಡುವ ಕನಸನ್ನು ಎರಡೂ ತಂಡಗಳು ಹೊಂದಿವೆ.
ಡೆಲ್ಲಿಗೆ ಇದು ತವರು ಅಂಗಳವಾಗಿದೆ. ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಉಭಯ ತಂಡಗಳು ಬಲಿಷ್ಠವಾಗಿವೆ. ಡೆಲ್ಲಿ ತಂಡದ ಪರ ಹಲವು ವರ್ಷಗಳ ಪರ ಆಡಿದ್ದ ರಿಷಭ್ ಪಂತ್ ಈಗ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಡೆಲ್ಲಿ ತಂಡವನ್ನು ಅಕ್ಷರ್ ಪಟೇಲ್ ಮುನ್ನಡೆಸುತ್ತಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಜ್ಯಾಕ್ ಫ್ರೇಸರ್ ಮೆಕ್‌ಗುರ್ಕ್, ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್, ಕೆಎಲ್ ರಾಹುಲ್, ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ಮುಖೇಶ್ ಕುಮಾರ್, ಟಿ. ನಟರಾಜನ್ ಇದ್ದಾರೆ.
ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಮಿಚೆಲ್ ಮಾರ್ಷ್, ಆರ್ಯನ್ ಜುಯಾಲ್, ರಿಷಭ್ ಪಂತ್ (ನಾಯಕ), ನಿಕೋಲಸ್ ಪೂರನ್, ಆಯುಷ್ ಬಡೋನಿ, ಡೇವಿಡ್ ಮಿಲ್ಲರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಆಕಾಶ್ ಸಿಂಗ್, ಶಮರ್ ಜೋಸೆಫ್ ಇದ್ದಾರೆ.