ತಿಪಟೂರು:
ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 28 ಜನ ಪ್ರವಾಸಿಗರು ಮೃತಪಟ್ಟಿದ್ದಾರೆ. ಉಗ್ರರ ಇಂತಹ ಹೇಯ ಕೃತ್ಯವನ್ನು ಖಂಡಿಸಿ ತಿಪಟೂರಿನಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಪ್ರದರ್ಶನ ಮಾಡಿದರು. ಹಿಂದೂ ಮುಸ್ಲಿಂ ರು ಒಗ್ಗೂಡಿ ಮೃತರ ಆತ್ಮಕ್ಕೆ ಶಾಂತಿ ಕೋರುವ ಸಲುವಾಗಿ ಶ್ರದ್ಧಾಂಜಲಿ ಶಾಂತಿಯುತ ಪ್ರತಿಭಟನೆ ನಡೆಸಿದರು.
ಈ ವೇಳೆ ತಿಪಟೂರು ನಗರದ ನಗರಸಭೆ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳು ಸೇರಿ ನಗರದಲ್ಲಿ ಮೌನಮೆರವಣಿಗೆ ನಡೆಸಿ, ನಗರಸಭೆ ವೃತ್ತದಲ್ಲಿ ಮೇಣದಬತ್ತಿ ಹಚ್ಚಿ ಹುತಾತ್ಮ ಯೋಧರು ಹಾಗೂ ಮೃತರ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು. ಇದೇ ವೇಳೆ ಉಗ್ರರ ಪೈಶಾಚಿಕ ಕೃತ್ಯದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಪ್ರತಿಭಟನೆಯಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರು, ಹೋರಾಟಗಾರರು, ಎಲ್ಲ ಸರ್ವ ಧರ್ಮದವರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.