ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಕ್ಚ್ಮೀಪುರ ಗ್ರಾಮದ ನಾಲ್ವರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೈನಿಂಗ್ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಇದ್ದರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಈ ಅಪಘಾತದಲ್ಲಿ ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತುರ್ತು ಚಿಕಿತ್ಸೆಗಾಗಿ ಕೊಪ್ಪಳದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಘಟನೆಯ ಮಾಹಿತಿ ಪಡೆದ ಸಂಡೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿಯಬೇಕಾದರೆ ತನಿಖೆ ಮುಂದುವರೆಯುತ್ತಿದೆ.