GUBBI: ಭೀಕರ ರಸ್ತೆ ಅಪಘಾತ| ಮಹಿಳೆ ದಾರುಣ ಸಾವು

ಗುಬ್ಬಿ: 

ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ಕಳ್ಳಿಪಾಳ್ಯ ರೈಲ್ವೆ ಗೇಟ್‌ ಬಳಿ ನಡೆದಿದೆ. ತುಮಕೂರಿನ ಮಾರ್ಗವಾಗಿ ಬರುತ್ತಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಸಾವನ್ನಪಿದ್ದು ಮತ್ತೋರ್ವನಿಗೆ ಗಾಯಗಳಾಗಿದೆ. ಗಾಯಗೊಂಡ ಬೈಕ್‌ ಸವಾರನನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತುಮಕೂರು ತಾಲೂಕಿನ ಹೆತ್ತೇನಹಳ್ಳಿ ಗ್ರಾಮದವರಾದ ಶಾರದಾ ಹಾಗೂ ಕುಮಾರ್‌ ಸಂಬಂಧಿಕರ ಮನೆಗೆ ಹೋಗಿ , ಬೈಕ್‌ನಲ್ಲಿ ವಾಪಸ್‌ ಊರಿಗೆ ತೆರಳುವ ವೇಳೆ ಮಾರ್ಗ ಮಧ್ಯೆ ಕಳ್ಳಿಪಾಳ್ಯ ರೈಲ್ವೇ ಗೇಟ್‌ ಬಳಿ  ಯಮನಂತೆ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಹಿಳೆ ಶಾರದಾ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಕುಮಾರ್‌ಗೆ ಗಂಭೀರ ಗಾಯಗಳಾಗಿದೆ. ಗಾಯಾಳು ಕುಮಾರ್‌ನನ್ನು ಕೂಡಲೇ ಗುಬ್ಬಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗ್ತಿದೆ. ಅಪಘಾತದಲ್ಲಿ ಬೈಕ್‌ ಸಂಪೂರ್ಣ ನಜ್ಜುಗುಜ್ಜಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಶಿರಾ ಉಪವಿಭಾಗದ ಡಿವೈಎಸ್‌ಪಿ ಶೇಖರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರಿಂದ ಅಪಘಾತದದ ಬಗ್ಗೆ ಮಾಹಿತಿ ಪಡೆದಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Author:

...
Keerthana J

Copy Editor

prajashakthi tv

share
No Reviews