KITCHEN TIPS :
ಆಲೂ ಮಂಚೂರಿ ರೆಸಿಪಿ
ಬೇಕಾಗುವ ಪದಾರ್ಥಗಳು :
- ಆಲೂಗಡ್ಡೆ-4
- ಮೈದಾಹಿಟ್ಟು- ಅರ್ಧ ಬಟ್ಟಲು
- ಜೋಳದ ಹಿಟ್ಟು- ಮುಕ್ಕಾಲು ಬಟ್ಟಲು
- ಶುಂಠಿ, ಬೆಳ್ಳುಳ್ಳಿ ಪೇಸ್ಟ್- ಅರ್ಧ ಚಮಚ
- ಅಚ್ಚ ಖಾರದ ಪುಡಿ- 1 ಚಮಚ
- ಉಪ್ಪು- ರುಚಿಗೆ ತಕ್ಕಷ್ಟು
- ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು
- ಹಸಿಮೆಣಸಿನ ಕಾಯಿ- ಸಣ್ಣಗೆ ಹೆಚ್ಚಿದ್ದು 2-3
- ಬೆಳ್ಳುಳ್ಳಿ- ಸಣ್ಣಗೆ ಹೆಚ್ಚಿದ್ದು ಸ್ವಲ್ಪ
- ಕ್ಯಾಪ್ಸಿಕಂ- ಸ್ವಲ್ಪ
- ಈರುಳ್ಳಿ-1
- ಸೋಯಾ ಸಾಸ್- 1 ಚಮಚ
- ಟೊಮೆಟೋ ಸಾಸ್- 1 ಚಮಚ
- ವಿನೆಗರ್- ಅರ್ಧ ಚಮಚ
- ಚಿಲ್ಲಿ ಸಾಸ್- ಅರ್ಧ ಚಮಚ
- ಕಾಳುಮೆಣಸಿನ ಪುಡಿ- ಸ್ವಲ್ಪ
ಮಾಡುವ ವಿಧಾನ :
ಮೊದಲಿಗೆ ಆಲೂಗಡ್ಡೆ ಸಿಪ್ಪೆ ತೆಗೆದು ಸಣ್ಣಗೆ ಕತ್ತರಿಸಿಕೊಂಡು ಬೇಯಿಸಿಕೊಳ್ಳಬೇಕು. ಸಂಪೂರ್ಣವಾಗಿ ನುಣ್ಣಗೆ ಆಗದಂತೆ ಬೇಯಿಸಿಕೊಳ್ಳಬೇಕು. ನಂತರ ಒಂದು ಪಾತ್ರೆಗೆ ಮೈದಾಹಿಟ್ಟು, ಜೋಳದ ಹಿಟ್ಟು, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಅಚ್ಚ ಖಾರದ ಪುಡಿ, ಉಪ್ಪು, ಎಣ್ಣೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು. ಒಲೆಯ ಮೇಲೆ ಬಾಣಲೆ ಇಟ್ಟು ಎಣ್ಣೆ ಕಾದ ನಂತರ ಮಿಶ್ರಣಕ್ಕೆ ಅಲೂಗಡ್ಡೆಗಳನ್ನು ಚೆನ್ನಾಗಿ ಅದ್ದಿ, ಎಣ್ಣೆಗೆ ಹಾಕಿ ಚಿನ್ನದ ಬಣ್ಣ ಬರುವವರೆಗೆ ಕರಿದುಕೊಳ್ಳಬೇಕು. ನಂತರ ಬಾಣಲೆಗೆ ಸ್ವಲ್ಪ ಎಣ್ಣೆ ಹಾಕಿ ಹಸಿಮೆಣಸಿನ ಕಾಯಿ, ಬೆಳ್ಳುಳ್ಳಿ, ಕ್ಯಾಪ್ಸಿಕಂ, ಈರುಳ್ಳಿ ಹಾಕಿ ಚೆನ್ನಾಗಿ ಹುರಿದುಕೊಳ್ಳಬೇಕು. ಬಳಿಕ ಸೋಯಾ ಸಾಸ್, ಟೊಮೆಟೋ ಸಾಸ್, ವಿನೆಗರ್, ಚಿಲ್ಲಿ ಸಾಸ್, ಉಪ್ಪು, ಕಾಳುಮೆಣಸಿನ ಪುಡಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು. ನಂತರ ಅರ್ಧ ಚಮಚದಷ್ಟು ಜೋಳದ ಹಿಟ್ಟಿಗೆ ನೀರು ಮಿಶ್ರಣ ಮಾಡಿಕೊಂಡು ಮಂಚೂರಿ ಮಸಾಲೆಗೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ನಂತರ ಎಣ್ಣೆಯಲ್ಲಿ ಕರಿದುಕೊಂಡ ಆಲೂಗಡ್ಡೆಗಳನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿದರೆ, ರುಚಿಕರವಾದ ಆಲೂ ಮಂಚೂರಿ ಸವಿಯಲು ಸಿದ್ಧ.