ಹುಬ್ಬಳ್ಳಿ : ಆಸ್ಪತ್ರೆ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ ..!

ಹುಬ್ಬಳ್ಳಿ :

ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೋರ್ವ ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿ ನಗರದ ಕೆಎಂಸಿ ಆರ್‌ ಐ ಆಸ್ಪತ್ರೆಯಲ್ಲಿ ನಡೆದಿದೆ. ಹುಬ್ಬಳ್ಳಿಯ ನೇಕಾರನಗರದ ನಿವಾಸಿ ಆದರ್ಶ ಎಂಬಾತ ಮೃತ ದುರ್ದೈವಿಯಾಗಿದ್ದಾನೆ.

ಜ್ವರ ಬಂದಿದ್ದರಿಂದ ಕಳೆದ ಎರಡು ದಿನಗಳ ಹಿಂದೆಯಷ್ಟೇ ಕೆಎಂಸಿಆರ್‌ ಐ ಗೆ ದಾಖಲಾಗಿ  ಚಿಕಿತ್ಸೆ ಪಡೆಯುತ್ತಿದ್ದ ಯುವಕ , ಏಕಾಏಕಿ ಆಸ್ಪತ್ರೆಯ ಮೂರನೇ ಮಹಡಿಯ ಕಿಟಕಿ ಮೂಲಕ ಕೆಳಗೆ ಜಿಗಿದಿದ್ದು, ಕೂಡಲೇ ಆತನನ್ನು ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಿದರೂ ಕೂಡ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.

ಇನ್ನು ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Author:

share
No Reviews