ಹುಬ್ಬಳ್ಳಿ : ಕೆರೆಯಲ್ಲಿ ಹಸು ಮೈ ತೊಳೆಯಲು ಹೋದ ವೇಳೆ ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ನಡೆದಿದೆ. ಹಿರೇಹರಕುಣಿ ಗ್ರಾಮದ ನಿವಾಸಿ ಮೈಲಾರಪ್ಪ ಬಸಪ್ಪ ಉಣಕಲ್ (24) ಎಂಬುವನು ಮೃತ ದುರ್ದೈವಿಯಾಗಿದ್ದಾನೆ.
ಕುಂದಗೋಳ ತಾಲೂಕಿನಲ್ಲಿರುವ ತನ್ನ ಅಕ್ಕನ ಮನೆಗೆ ಬಂದಿದ್ದು, ಹಸುವಿನ ಮೈ ತೊಳೆಯಲು ಕೆರೆಗೆ ಹೋಗಿದ್ದ ವೇಳೆ ಧೀಡಿರ್ ಮಳೆ ಮತ್ತು ಸಿಡಿಲು ಶುರುವಾಗಿದ್ದು, ಈ ವೇಳೆ ಯುವಕನಿಗೆ ಸಿಡಿಲು ಬಡಿದಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ನಡೆದ ಕೂಡಲೇ ಸ್ಥಳೀಯರು ಮತ್ತು ಕುಟುಂಬಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಕುಂದಗೋಳ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.