ಹುಬ್ಬಳ್ಳಿ : ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಯತ್ನ

ಯುವಕ ಸಿರಾಜ್
ಯುವಕ ಸಿರಾಜ್
ಧಾರವಾಡ/ ಹುಬ್ಬಳ್ಳಿ

ಹುಬ್ಬಳ್ಳಿ :

ಯುವಕನ ಕಾಟಕ್ಕೆ ಬೇಸತ್ತು ಯುವತಿಯೋರ್ವಳು ಆತ್ನಹತ್ಯೆಗೆ ಯತ್ನಿಸಿರುವಂತಹ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮುಸ್ಲಿಂ ಯುವಕ ಯುವತಿಯ ಪೋಟೋ ಇಟ್ಟುಕೊಂಡು‌ ಪ್ರೀತಿಸುವಂತೆ, ಅಲ್ದೇ ತನ್ನನ್ನೇ ಮದುವೆಯಾಗುವಂತೆ ಒತ್ತಾಯ ಮಾಡ್ತಿದ್ದು, ಇದರಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಧಾರವಾಡ ಜಿಲ್ಲೆಯ ಕುಂದಗೋಳದ ವಿದ್ಯಾ ಎಂಬ ಯುವತಿಗೆ ಅದೇ ಗ್ರಾಮದ ಸಿರಾಜ್‌ ಎಂಬಾತ ಮದುವೆಯಾಗುವಂತೆ ಕಿರುಕುಳ ನೀಡಿದ್ದಲ್ಲದೇ, ಹಲ್ಲೆ ಸಹ ಮಾಡಿದ್ದಾನೆ, ಇದರಿಂದ ಮನನೊಂದ ಯುವತಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ವಿಷಯ ತಿಳಿದು ಆಕೆಯ ಕುಟುಂಬಸ್ಥರು ವಿದ್ಯಾಳನ್ನು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದ್ದು, ಸದ್ಯ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇನ್ನು ಯುವತಿಗೆ ಕಿರುಕುಳ ನೀಡುತ್ತಿದ್ದ ಸಿರಾಜ್​ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಹುಬ್ಬಳ್ಳಿ ಪೊಲೀಸ್‌ ಠಾಣೇಯಲ್ಲಿ ಪ್ರಕರಣ ದಾಖಲಾಗಿದೆ. 

 

Author:

share
No Reviews