ಹುಬ್ಬಳ್ಳಿ: ಮಕ್ಕಳ ಪೌಷ್ಟಿಕ ಆಹಾರಕ್ಕೆ ಕನ್ನ| ಅಂಗನವಾಡಿ ಕಾರ್ಯಕರ್ತರು ಸೇರಿ 26 ಜನರ ಬಂಧನ

ವಶಪಡಿಸಿಕೊಂಡಿರುವ ಮಕ್ಕಳ ಪೌಷ್ಟಿಕ ಆಹಾರ
ವಶಪಡಿಸಿಕೊಂಡಿರುವ ಮಕ್ಕಳ ಪೌಷ್ಟಿಕ ಆಹಾರ
ಧಾರವಾಡ/ ಹುಬ್ಬಳ್ಳಿ

ಹುಬ್ಬಳ್ಳಿ: 

ಅಂಗನವಾಡಿ ಮಹಿಳೆಯರು ಹಾಗೂ ಬಾಣಂತಿಯರಿಗೆ ನೀಡಬೇಕಾಗಿದ್ದ ಮಕ್ಕಳ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಆರೋಪದ ಮೇಲೆ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನ ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಫೆಬ್ರವರಿ 15 ರಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸಹಾಯಕ ಆಯುಕ್ತರು ಕಾಂಗ್ರೆಸ್ನಾಯಕಿ ಬೈತೂಲ್ಲಾ ಕಿಲ್ಲೇದಾರ್ ಪತಿ ಫಾರೂಕ್ಗೆ ಸೇರಿದ ಗಬ್ಬೂರ ಬಳಿಯ ಗೋದಾಮಿನ ಮೇಲೆ ದಾಳಿ ಮಾಡಿದ್ದರು. ವೇಳೆ ಗೋದಾಮಿನಲ್ಲಿ ಅಪಾರ ಪ್ರಮಾಣದ ಮಕ್ಕಳ ಅಹಾರ, ಗರ್ಭಿಣಿಯರ ಆಹಾರವನ್ನು ಸಂಗ್ರಹ ಮಾಡಿದ್ದು ಪತ್ತೆಯಾಗಿತ್ತು. ಬಳಿಕ, ಅಧಿಕಾರಿಗಳು ಕಸಬಾಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಂಬಂಧ ಹುಬ್ಬಳ್ಳಿಯ ಕಸಬಾಪೇಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಫಾರೂಕ್ ಸೇರಿ ಮೂವರು ಆರೋಪಿಗಳ ವಿರುದ್ದ ದೂರು ದಾಖಲಾಗಿತ್ತು.

ದೂರು ಆಧರಿಸಿ ಹುಬ್ಬಳ್ಳಿಯ ಕೇಶ್ವಾಪುರ ಮತ್ತು ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಹಾಗೂ ಕಾರ್ಯಚರಣೆಯಲ್ಲಿ ಗೋದಿ ರವ, ಹಾಲಿನ ಪುಡಿ, ಬೆಲ್ಲ, ಹೆಸರುಕಾಳು ಮತ್ತು ಅಕ್ಕಿ ಸೇರಿದಂತೆ ನಾಲ್ಕು ಲಕ್ಷ ಮೌಲ್ಯದ ಅಹಾರದ ಪಾಕೆಟ್​​ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಗೋದಾಮು ಮಾಲೀಕ ಹಾಗೂ ಬಾಡಿಗೆ ಪಡೆದುಕೊಂಡವರು ಸೇರಿ ಮೊದಲು ಎಂಟು ಜನರನ್ನು ವಶಕ್ಕೆ ಪಡೆಯಲಾಗಿತ್ತು. ಅವರಿಂದ ಮಾಹಿತಿ ಪಡೆದ ಬಳಿಕ ಸುಮಾರು 18 ಅಂಗನವಾಡಿಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಆಹಾರ ಪಾಕೆಟ್ಗಳನ್ನು ಸಂಗ್ರಹಿಸಿರುವುದು ಕಂಡು ಬಂದಿದೆ. ಹೀಗಾಗಿ, 18 ಜನ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 26 ಜನರನ್ನು ಬಂಧಿಸಲಾಗಿದೆ.

 

Author:

share
No Reviews