ಹುಬ್ಬಳ್ಳಿ: ಹುಬ್ಬಳ್ಳಿಯ ರಾಮನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಪುಂಡರ ಗುಂಪು ಮಾರಣಾಂತಿಕ ಹಲ್ಲೆ ನಡೆಸಿರುವ ದಾರುಣ ಘಟನೆ ನಡೆದಿದೆ. ತಮ್ಮ ಏರಿಯಾದಲ್ಲಿ 'ಹವಾ ಮೆಂಟೇನ್' ಮಾಡುವ ನಿಟ್ಟಿನಲ್ಲಿ ಈ ಹಲ್ಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಯುವಕ ಕೃಷ್ಣ ಎಂಬಾತ ಮೇಲೆ ಪುಂಡರು ಹಲ್ಲೆ ನಡೆಸಿದ್ದಾರೆ. ಆರ್ಯನ್, ಸುಪ್ರೀತ್, ಆಲ್ವಿನ್ ಹಾಗೂ ವಿಶ್ಲೇಶ್ ಸೇರಿ ಐದಾರು ಮಂದಿ ಯುವಕರ ತಂಡ ಈ ಯುವಕನ ಮೇಲೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದ ಕೃಷ್ಣನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗ್ತಿದೆ.
ಈ ಸಂಬಂಧ ಕೇಶ್ವಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಒಂದೆಡೆ ನಗರದಲ್ಲಿ ಪುಡಿ ಗ್ಯಾಂಗ್‌ಗಳ ಚಟುವಟಿಕೆಗಳು ಮತ್ತೆ ಗಂಭೀರತೆ ಪಡೆದುಕೊಳ್ಳುತ್ತಿವೆ ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿದೆ.