ಚಾಮರಾಜನಗರ : ಪತಿಯೇ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗುಳ್ಳದ ಬಯಲು ಗ್ರಾಮದಲ್ಲಿ ನಡೆದಿದೆ. ಇನ್ನು ಈ ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣವನ್ನು ಮೂಡಿಸಿದೆ.
ಇನ್ನು ಗುಳ್ಳದ ಗ್ರಾಮದ ನಿವಾಸಿಗಳಾದ ಭದ್ರ ಮತ್ತು ಅವರ ಪತ್ನಿ ಮಾದೇವಿ (28) ನಡುವೆ ಇತ್ತೀಚಿಗೆ ಕುಟುಂಬ ಕಲಹ ತಾರಕಕ್ಕೇರಿದ ಹಿನ್ನಲೆ ಇದೇ ಕಾರಣದಿಂದಾಗಿ ಮಾತಿನ ಚಕಮಕಿ ಜೋರಾಗಿ, ಕೊನೆಗೆ ಭದ್ರನು ತನ್ನ ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಮಾದೇವಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ ಎನ್ನಲಾಗಿದೆ.
ಇನ್ನು ಈ ಘಟನೆಯ ಮಾಹಿತಿ ತಿಳಿದ ಕೂಡಲೇ ಹನೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿತ ಭದ್ರನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಲಾಗಿದೆ. ಕೊಲೆಗೆ ನಿಖರ ಕಾರಣ ಏನು ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಬಂದಿಲ್ಲ. ಆದರೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದ್ದಾರೆ. ಇನ್ನು ಸ್ಥಳೀಯರು ಈ ಘಟನೆಯಿಂದ ಬೆಚ್ಚಿಬಿದ್ದು, ಶೋಕಸಾಗರದಲ್ಲಿ ಮುಳುಗಿದ್ದಾರೆ.