ಹೈದರಾಬಾದ್ : ಹೈದರಾಬಾದ್ನ ತೆಲಂಗಾಣದ ಚಾರ್ ಮಿನಾರ್ ಬಳಿಯ ಗುಲ್ಜಾರ್ ಹೌಸ್ ಪ್ರದೇಶದಲ್ಲಿ ಇಂದು ಬೆಳಗಿನ ಸುಮಾರಿಗೆ ಜಾವ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ 17 ಮಂದಿ ಸಜೀವ ದಹನವಾಗಿರುವ ಘಟನೆ ನಡೆದಿದೆ. ಮೃತರಲ್ಲಿ ರಜೆಗೆ ಬಂದಿದ್ದ ಮಕ್ಕಳು ಕೂಡ ಸೇರಿದ್ದಾರೆ ಎನ್ನಲಾಗ್ತಿದೆ.
ಕಟ್ಟಡದಲ್ಲಿ ಬೆಳಗಿನ ಜಾವ 6 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದು, ರಜೆಗೆ ಬಂದಿದ್ದ ಮಕ್ಕಳು ಸೇರಿ 17 ಮಂದಿ ಮೃತಪಟ್ಟಿದ್ದಾರೆ. ಇನ್ನು ಘಟನೆಯ ವೇಳೆ ಕಟ್ಟಡದಲ್ಲಿ 20ಕ್ಕೂ ಹೆಚ್ಚು ಮಂದಿ ಇದ್ದರು ಎಂಬ ಶಂಕೆ ವ್ಯಕ್ತವಾಗಿದ್ದು, ಗಂಭೀರವಾಗಿ ಗಾಯಗೊಂಡ ಗಾಯಾಳಯಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗ್ತಿದೆ.
ಇನ್ನು ವಿಷಯ ತಿಳಿದು ಅಗ್ನಿಶಾಮಕ ದಳ ಸಿಬ್ಬಂದಿ ಸೇರಿದಂತೆ ಪೊಲೀಸರು ಸ್ಥಳಕ್ಕಾಗಿಮಿಸಿ ಬೆಂಕಿ ನಂದಿಸುವ ಕಾರ್ಯಚರಣೆ ನಡೆಸುತ್ತಿದ್ದು, ಕಟ್ಟಡದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ₹50,000 ಆರ್ಥಿಕ ನೆರವಿನ ಘೋಷಣೆ ಮಾಡಿದ್ದಾರೆ.
ಈ ಭೀಕರ ಅಗ್ನಿ ಅವಘಡದಿಂದ ಸ್ಥಳೀಯರಲ್ಲಿ ಭೀತಿ ಹಾಗೂ ದುಃಖದ ಆವರಣ ಮೂಡಿದ್ದು, ಕೂಡಲೇ ಕಟ್ಟಡ ಸುರಕ್ಷತೆ ಕುರಿತು ಕ್ರಮ ಕೈಗೊಳ್ಳಬೇಕೆಂಬ ಆಗ್ರಹಿಸುತ್ತಿದ್ದಾರೆ.