ಕೆಪಿಎಸ್‌ಸಿಯಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮಹತ್ವದ ಆದೇಶ..!

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಉದ್ಯೋಗ-ಶಿಕ್ಷಣ

KPSC: ಕೆಪಿಎಸ್‌ಸಿ ಯು ಪರೀಕ್ಷೆಗಳ ನಿಯಮಗಳಲ್ಲಿ ಬದಲಾವಣೆಗಳನ್ನು ತರುತ್ತಲೇ ಇರುತ್ತದೆ. ಇದೀಗ ಮತ್ತೊಂದು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಕೆಪಿಎಸ್‌ಸಿಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಕಡ್ಡಾಯವಾಗಿ ಬಳಸಬೇಕು ಎಂದು ಸೂಚನೆ ನೀಡಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈವರೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್‌ನಿಂದ ಪರೀಕ್ಷೆ ಬರೆಯಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗುತ್ತಿತ್ತು. ಆದರೆ ಈಗ ಸೂಚನೆಯಲ್ಲಿ ಮಾರ್ಪಾಡು ಮಾಡಿ ಫೆಬ್ರವರಿ 16ರಿಂದ ಕೆಪಿಎಸ್‌ಸಿ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಪೆನ್ ಮಾತ್ರ ಬಳಸಬೇಕು ಎಂದು ಕೆಪಿಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಮಾನ್ಯವಾಗಿ ಬಹುತೇಕ ಎಲ್ಲೆಡೆ ನೀಲಿ ಪೆನ್ ಬಳಕೆಯಲ್ಲಿದೆ. ಆದರೆ, ಕೆಪಿಎಸ್‌ಸಿ ಪರೀಕ್ಷೆಗೆ ಮಾತ್ರ ಕಪ್ಪು ಬಣ್ಣದ ಪೆನ್ ಬಳಕೆಗೆ ನಿರ್ದೇಶನ ನೀಡುವುದರಿಂದ ಅಭ್ಯರ್ಥಿಗಳು ಅನಗತ್ಯವಾಗಿ ಗೊಂದಲಕ್ಕೆ ಒಳಗಾಗುತ್ತಾರೆ. ಆಯೋಗದ ಸದಸ್ಯರು ಸಾಮಾನ್ಯವಾಗಿ ಬಳಕೆಯಲ್ಲಿರುವ ನೀಲಿ ಪೆನ್ ಬಳಕೆಗೆ ಸಲಹೆ ನೀಡಿದ ಹಿನ್ನೆಲೆ ಈ ನಿರ್ಧಾರವನ್ನು ತೆಗೆದುಕೊಳಲಾಗಿದೆ ಎಂದು ತಿಳಿದುಬಂದಿದೆ.

 

Author:

...
Editor

ManyaSoft Admin

Ads in Post
share
No Reviews