ಬೆಂಗಳೂರು : ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ಆದೇಶ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರ ಆದೇಶವನ್ನು‌ ಕರ್ನಾಟಕದ ಹೈಕೋರ್ಟ್ ರದ್ದುಪಡಿಸಿದೆ.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳನ್ನು ಅಮಾಯಕರ ಪಟ್ಟಿಗೆ ಸೇರಿಸಿ ಬಿಡುಗಡೆ ಮಾಡಲು ಮುಂದಾದ ಸರ್ಕಾರಕ್ಕೆ ಭಾರೀ ಹಿನ್ನಡೆ ಆಗಿದೆ. ಗಲಭೆಕೋರರನ್ನು ಅಮಾಯಕರಾಗಿ ಗುರುತಿಸಿ ಬಿಡಲು ಕರ್ನಾಟಕ ಸರ್ಕಾರ ತೆಗೆದುಕೊಂಡ ನಿರ್ಧಾರವನ್ನು ಹೈಕೋರ್ಟ್ ತಡೆ ಹಿಡಿದಿದೆ.

ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳನ್ನು ಅಕ್ಟೋಬರ್ 10, 2024 ರಂದು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ದ್ವಿಸದಸ್ಯ ಪೀಠ ಇಂದು ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ.

ಈ ಮಹತ್ವದ ತೀರ್ಪು ಇಂದು ಹೈಕೋರ್ಟ್‌ನ ನ್ಯಾ. ಎನ್.ವಿ. ಅಂಜಾರಿಯಾ ಅವರು ಪ್ರಕಟಿಸಿದ್ದಾರೆ. ಇನ್ನು ನ್ಯಾ. ಎನ್.ವಿ. ಅಂಜಾರಿಯಾ ಅವರಿಗೆ ಇಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಕೊನೆಯ ಬಾರಿ ತೀರ್ಪು ಪ್ರಕಟಿಸಿದ್ದಾರೆ.

 

Author:

...
Sushmitha N

Copy Editor

prajashakthi tv

share
No Reviews